ರಕ್ಷಿತ್ ಗೆ ಕಾಲ್ ಮಾಡಿ ರಜನಿಕಾಂತ್ ಅವರು ಮಾತನಾಡಿದ್ದಾರೆ ನೀವೇ ಕೇಳಿ

 

ಕನ್ನಡ ಚಿತ್ರರಂಗದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಯವರು ಸದ್ಯ 777 ಚಾರ್ಲಿ ಸಿನಿಮಾದ ಯಶಸ್ಸಿನ ಖುಷಿಯಲ್ಲಿದ್ದಾರೆ. ಹೌದು ಚಾರ್ಲಿ ಸಿನಿಮಾಗೆ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಕನ್ನಡ ಮಾತ್ರವಲ್ಲದೆ ಬೇರೆ ಬೇರೆ ಭಾಷೆಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಪ್ರೇಕ್ಷಕರು ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ. ಹೌದು ಸಿನಿ ಗಣ್ಯರು ಕೂಡ ರಕ್ಷಿತ್ ಸಿನಿಮಾಗೆ ಫಿದಾ ಆಗಿದ್ದು ಸ್ಯಾಂಡಲ್‌ವುಡ್ ಮಾತ್ರವಲ್ಲದೇ ಪರಭಾಷೆಯ ಗಣ್ಯರು ಚಾರ್ಲಿಯನ್ನು ಮೆಚ್ಚಿಕೊಂಡಿದ್ದಾರೆ. ಹೌದು ಧರ್ಮ ಮತ್ತು ಚಾರ್ಲಿಯ ಭಾವನಾತ್ಮಕ ಕಥೆಗೆ ಮನಸೋತು ರಕ್ಷಿತ್ ಶೆಟ್ಟಿ ಪ್ರತಿಕ್ರಿಯೆ ನೀಡುತ್ತಿದ್ದು ಇನ್ನು ರಾಜಕೀಯ ಗಣ್ಯರು ಕೂಡ ಸಿನಿಮಾ ಚಾರ್ಲಿಗೆ ನಮನಸೋತಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ ಸಂಸದ ತೇಜಸ್ವಿ ಸೂರ್ಯ ಸೇರಿದಂತೆ ಅನೇಕರು ಸಿನಿಮಾ ನೋಡಿ ಹಾಡಿಹೊಗಳಿದ್ದು ಸಿ ಎಂ ಬೊಮ್ಮಾಯಿ ರಕ್ಷಿತ್ ಸಿನಿಮಾ ನೋಡಿ ಕಣ್ಣೀರಿಟ್ಟಿದ್ದರು. ಹೌದು ಬಾಕ್ಸ್ ಆಫೀಸ್‌ನಲ್ಲಿ ಚಾರ್ಲಿ ಭರ್ಜರಿ ಕಮಾಯಿ ಮಾಡಿದ್ದು ಈ ಸಿನಿಮಾಗೆ ಎಲ್ಲಾ ಕಡೆಯಿಂದ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗುತ್ತಿರುವ ಸಮಯದಲ್ಲೇ ಸೂಪರ್ ಸ್ಟಾರ್ ರಜನಿಕಾಂತ್ ರವರು ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ. ಈ ಬಗ್ಗೆ ರಕ್ಷಿತ್ ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದು 777 ಚಾರ್ಲಿ ವೀಕ್ಷಿಸಿದ ಬಳಿಕ ಸೂಪರ್ ಸ್ಟಾರ್ ರಜನಿಕಾಂತ್ ರಕ್ಷಿತ್ ಶೆಟ್ಟಿಗೆ ಕರೆ ಮಾಡಿದ್ದಾರೆ. ಸಿನಿಮಾದ ಬಗ್ಗೆ ಹಾಡಿಹೊಗಳಿದ್ದಾರೆ.